ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೃಹತ್ ಮಾನವ ಸರಪಳಿಯಲ್ಲಿ ಜಿಲ್ಲೆಯ 95 ಸಾವಿರ ಜನ ಭಾಗಿ
ಧಾರವಾಡ, ಸೆ.15: ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವ ದೊರೆಯುವಂತೆ ಮಾಡಿದ್ದಾರೆ. ಪ್ರತಿಯೊಬ್ಬರೂ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋμï ಲಾಡ್ ಹೇಳಿದರು.
ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ. ಭಾರತ ದೇಶವು ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ ಎಂದು ಸಚಿವ ಸಂತೋಷ ಲಾಡ ಅವರು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವಾದ್ಯಂತ ಪ್ರಜಾಪ್ರಭಯತ್ವದ ಮೌಲ್ಯಗಳು, ಆದರ್ಶಗಳು, ತತ್ವಗಳು ಮತ್ತು ಅದರ ಅನ್ವಯಿಕತೆಯನ್ನು ಒಳಗೊಂಡ ಬೃಹತ ನಿರ್ಣಯ ಹೊರಡಿಸಿದ ಸೆಪ್ಟೆಂಬರ 15 ಐತಿಹಾಸಿಕ ದಿನವಾಗಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಮತ್ತು ಸಾರ್ವತ್ರಿಕ ಮೌಲ್ಯವಾಗಿದೆ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಪ್ರಸಾದ ಅಬ್ಬಯ್ಯ, ಶಾಸಕರಾದ ಎನ್.ಎಚ್.ಕೋನರೆಡ್ಡಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕೀರ್ ಸನದಿ, ಮಾಜಿ ಸಂಸದರಾದ ಐ.ಜಿ.ಸನದಿ, ಹುಬ್ಬಳ್ಳಿ ಧಾರವಾಡ ಮಹಾನಗರದ ಪೆÇಲೀಸ್ ಆಯುಕ್ತರಾದ ಎನ್ ಶಶಿಕುಮಾರ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ,ಎಲ್. ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಡಿಡಿಪಿಐ ಎಸ್.ಎಸ್.ಕೆಳದಿಮಠ ಸೇರಿದಂತೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು.