NewsNews In KannadaNorth Karnataka
ಉಮಚಗಿ ಕೆರೆಗೆ ಭೇಟಿ ನೀಡಿದ ಶಾಸಕರಾದ ಎನ್.ಎಚ್.ಕೋನರೆಡ್ಡಿ
ಹುಬ್ಬಳ್ಳಿ ,ಡಿ.2: ಇಂದು ನವಲಗುಂದ ವಿಧಾನಸಭಾ ಮತಕ್ಷೇತ್ರ-69 ವ್ಯಾಪ್ತಿಯ ಹುಬ್ಬಳ್ಳಿ ತಾಲ್ಲೂಕಿನ ಉಮಚಗಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಂದ ಇದರ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಕೆರೆಗೆ ಶಾಸಕರಾದ ಎನ್.ಎಚ್.ಕೋನರೆಡ್ಡಿ ಅವರು ಭೇಟಿ ನೀಡಿದರು.
ಕೆರೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ಹಾಗೂ ಗುಣಮಟ್ಟತೆ ಬಗ್ಗೆ ಮಾಹಿತಿ ಪಡೆದು, ನೀರು ಕುಡಿಯಲು ಬಾರದ ಪರಿಸ್ಥಿತಿಯಲ್ಲಿರುವುದರಿಂದ ಉಮಚಗಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.