NewsNews In Kannada

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

ಹುಬ್ಬಳ್ಳಿ, ಸೆ.03: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶೇ.60 ಕ್ಕಿಂತ ಹೆಚ್ಚು ಶೇ.75 ರವರೆಗೆ ಅಂಕಗಳಿಸಿದವರಿಗೆ ಪ್ರೋತ್ಸಾಹಧನ ರೂ. 7000 ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ರೂ. 15000 ಪ್ರೋತ್ಸಾಹಧನ ನೀಡಲಾಗುವುದು.

ಅರ್ಹ ವಿದ್ಯಾರ್ಥಿಗಳು sw.kar.nic.in ಇಲಾಖಾ ವೆಬ್ ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಗೋಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08304-290464 ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close