NewsUncategorized

ಗೃಹ ಸಚಿವ ಅಮಿತ್ ಷಾ ಅವರಿಗೆ ಹುಬ್ಬಳ್ಳಿಯಲ್ಲಿ ಸ್ವಾಗತ

ಹುಬ್ಬಳ್ಳಿ: ಲೋಕಸಭಾ ಅಧ್ಯಕ್ಷ ಓಂ ಪ್ರಕಾಶ್ ಬಿರ್ಲಾ ಹಾಗೂ ಕೇಂದ್ರ ಸರ್ಕಾರದ ಸಚಿವರುಗಳೊಂದಿಗೆ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು.

ಲೋಕಸಭಾಧ್ಯಕ್ಷರು, ಕೇಂದ್ರ ಗೃಹ ಸಚಿವರು ಹಾಗೂ ಇತರೆ ಸಚಿವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಗೃಹ ಸಚಿವ ಅಮಿತ್ ಷಾ ಅವರಿಗೆ ಶಾಲುಹೊದಿಸಿ, ಹಾರ ತೊಡಿಸಿದ ಮುಖ್ಯಮಂತ್ರಿಗಳು ಲೇಖಕ ದೀಪಕ್ ಚೋಪ್ರಾ ಬರೆದಿರುವ “ಬುದ್ಧ- ದ ಸ್ಟೋರಿ ಆಫ್ ಎನಲೈಟ್‌ಮೆಂಟ್” ಪುಸ್ತಕವನ್ನು ನೀಡಿದರು. ನಂತರ ಗೃಹ ಸಚಿವರೊಂದಿಗೆ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆ ನಗರದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

ಲೋಕಸಭಾಧ್ಯಕ್ಷರು, ಕೇಂದ್ರ ಗೃಹ ಸಚಿವರು ಹಾಗೂ ಇತರೆ ಸಚಿವರು ಸಂಜೆ  ಹುಬ್ಬಳ್ಳಿ ಡೆನ್ನಿಸನ್ ಹೋಟೆಲ್‌ನಲ್ಲಿ ಆಯೋಜಿಸಲಾಗಿರುವ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿಯವರ ಪುತ್ರಿ ಅರ್ಪಿತಾ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಈ ಸಂದರ್ಭದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೊಯೆಲ್, ಕೇಂದ್ರ ಶಿಕ್ಷಣ ಸಚಿವ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ರಾಜ್ಯ ರೈಲ್ವೇ ಖಾತೆ ಸಚಿವ ರಾವ್ ಸಾಹೇಬ್ ಪಾಟೀಲ್ ದವನೆ, ರಾಜ್ಯ ಸರ್ಕಾರದ‌ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Please follow and like us:

Related Articles

Leave a Reply

Your email address will not be published. Required fields are marked *

Back to top button
Close