NewsNews In Kannada

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

ಧಾರವಾಡ, ಜ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಇಂದು (ಜ.30) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

 ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮಿಸಿದರು. ಹುತಾತ್ಮರ ದಿನದ ಅಂಗವಾಗಿ ಸಭೆಯಲ್ಲಿ ಮೌನಾಚರಣೆ ಮಾಡಲಾಯಿತು.

 ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ  ಕ್ಷಯ ರೋಗನಿಯಂತ್ರಣಾಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಕುಷ್ಠರೋಗ ಸಲಹೆಗಾರರು ಡಾ. ಎ.ಬಿ.ಸಾಲಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಪ್.ದೊಡಮನಿ, ಪಾತ್ರೋಟಿ, ಚೌಹಾಣ, ಎಂ.ಎನ್.ಅಗಡಿ, ಸಿಬ್ಬಂದಿ ವರ್ಗದವರು  ಪಾಲ್ಗೊಂಡಿದ್ದರು.

Please follow and like us:

Leave a Reply

Your email address will not be published.

Back to top button
Close