EducationNewsNews In Kannada
ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಹುಬ್ಬಳ್ಳಿ, ಆ.21: ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನ 2024-25 ನೇ ಸಾಲಿನ ಪ್ರಥಮ ಸೆಮಿಸ್ಟರ್ ( ಲ್ಯಾಟರಲ್ ಎಂಟ್ರಿ), 3 ನೇ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಬಾಕಿ ಉಳಿಕೆ ಸೀಟುಗಳಿಗೆ ಆಪ್‌ಲೈನ್ ಮೂಲಕ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಪಡೆದುಕೊಂಡು ಆಗಸ್ಟ್ 23 ರೊಳಗಾಗಿ ಸಲ್ಲಿಸಬೇಕು. ಅಭ್ಯರ್ಥಿಗಳು ದಾಖಲೆಗಳೊಂದಿಗೆ ನಿಗದಿತ ಶುಲ್ಕವನ್ನು ಭರಿಸಿ, ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 9449992321 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನ ಪ್ರಾಚಾರ್ಯರಾದ ಗಣಪತಿ ಹೆಳವಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.