NewsNews In KannadaNorth Karnataka
ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಧಾರವಾಡ, ನ 28: ಜಿಲ್ಲಾ ಪಂಚಾಯತಿ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಒಂದು ಮಹತ್ವದ ಆದೇಶ ನೀಡಿದೆ. ಇದರಿಂದ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಬಿಜೆಪಿಯ ಯೋಗೇಶ್ ಗೌಡ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿತನಿಧಿಗಳ ವಿಷೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು , ನ.29ರಂದು ಆರೋಪ ನಿಗಿದಿಪಡಿಸಲು ಕೋರ್ಟ್ ನಿರ್ಧರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ನಿ ಪ್ರಮುಖ ಆರೋಪಿಯಾಗಿದ್ದು, ನವೆಂಬರ್ 29ರಂದು ಎಲ್ಲಾ ಆರೋಪಿಗಳು ಖುದ್ದು ಹಾಜರಬೇಕೆಂದು ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಯಾರು ಇದರಲ್ಲಿ ಆರೋಪಿಗಳಾಗಿದ್ದರು ಅವರೆಲ್ಲರೂ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ