NewsNews In Kannada
ನರ್ಸಿಂಗ್ ಸಿಬ್ಬಂದಿ ನಿರ್ಲಕ್ಷ ಆರೋಪ ; ತಕ್ಷಣ ವರದಿ ಸಲ್ಲಿಸಲು DHO ಅವರಿಗೆ DC ಸೂಚನೆ
ಧಾರವಾಡ, ಜ.18: ಕಿಮ್ಸ್ ವೇದಾಂತ ಕೋವಿಡ್ ಕೇರ್ ಸೆಂಟರ್ನಲ್ಲಿ ನಿನ್ನೆಯ ದಿನ (ಜ.17) ನರ್ಸಿಂಗ್ ಸಿಬ್ಬಂದಿಗಳ ನಿರ್ಲಕ್ಷದಿಂದ ಕೋವಿಡ್ ಸೋಂಕಿತ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಿ 24 ಗಂಟೆಯೊಳಗೆ ವರದಿ ಸಲ್ಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಲಿಖಿತ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗೃತೆ ವಹಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಬೆಡ್, ವೈದ್ಯಕೀಯ ಸೌಲಭ್ಯ, ಆಕ್ಸಿಜನ್, ಔಷಧಿಗಳ ಸಂಗ್ರಹ ಹಾಗೂ ವಿತರಣೆಗೆ ಕ್ರಮ ವಹಿಸಲಾಗಿದೆ. ಸೋಂಕಿತರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳನ್ನು ಪೂರೈಸಲು ಯೋಜಿತ ರೀತಿಯಲ್ಲಿ ಕಾರ್ಯಗಳನ್ನು ಸಿದ್ಧಗೊಳಿಸಲಾಗಿದೆ.
ಕೋವಿಡ್ ಸೋಂಕಿತರು ಜಿಲ್ಲಾಡಳಿತ ಆರಂಭಿಸಿರುವ ಉಚಿತ ಸಹಾಯವಾಣಿ +91 8047168111 ಗೆ ಕರೆ ಮಾಡಿ ಬೆಡ್ ಲಭ್ಯತೆಯ ಮಾಹಿತಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.