News In KannadaNorth Karnataka

ನಿರ್ಲಕ್ಷ್ಯ ವಹಿಸದೇ ನಾಯಿ ಕಡಿತಕ್ಕೆ ಲಸಿಕೆ ಪಡೆಯಿರಿ

ಧಾರವಾಡ, ನ.21: ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಯಿ ಕಡಿತದ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ನಾಯಿ ಕಡಿತಕ್ಕೆ ಒಳಗಾದಾಗ ನಿರ್ಲಕ್ಷ್ಯ ವಹಿಸದೆ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತಿಚಿಗೆ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಂತರ್ ಇಲಾಖೆಗಳ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ವಿವಿಧ ಇಲಾಖೆಗಳ ಕಾರ್ಯವನ್ನು ಪರಿಶೀಲಿಸಿ, ಜಿಲ್ಲೆಯಲ್ಲಿ ನಾಯಿ ಕಡಿತದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ರೇಬೀಸ್ ಒಂದು ಮಾರಣಾಂತಿಕ ಖಾಯಿಲೆ, ಸಮಯಕ್ಕೆ ಸರಿಯಾಗಿ ನಾಯಿಕಡಿತದ ಲಸಿಕೆಗಳನ್ನು ಪಡೆದುಕೊಂಡು ಅದನ್ನು ತಡೆಗಟ್ಟಬೇಕು.

ಜಿಲ್ಲೆಯ ಎಲ್ಲ ನಗರ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕಾ ಆಸ್ಪತ್ರೆಗಳಲ್ಲಿ, ಜಿಲ್ಲಾ ಆಸ್ಪತ್ರೆಯಲ್ಲಿ, ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಾಯಿಕಡಿತದ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ನಾಯಿಕಡಿತಕ್ಕೆ ಒಳಗಾದಾಗ ತಪ್ಪದೇ ಲಸಿಕೆಯನ್ನು ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

 

Please follow and like us:

Leave a Reply

Your email address will not be published.

Back to top button
Close