ಹುಬ್ಬಳ್ಳಿ, ಆ.15: ದೇಶದ ಇತಿಹಾಸ ಹಾಗೂ ಸಂಸ್ಕೃತಿಯು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇದನ್ನು ನಮ್ಮ ನಾಡಿನ ಜನತೆಗೆ ಮತ್ತು ಮಕ್ಕಳಿಗೆ ತಿಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ದೇಶದ ಕಲೆ ಮತ್ತು ಸಂಸ್ಕೃತಿಯನ್ನು ವಿದೇಶದ ದಾರ್ಶನಿಕರು ಹಾಡಿ ಹೊಗಳಿದ್ದಾರೆ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಹೇಳಿದರು.
ಇಂದು ನೆಹರು ಮೈದಾನದಲ್ಲಿ ಹುಬ್ಬಳ್ಳಿ ನಗರ ತಾಲೂಕು ಸಾರ್ವಜನಿಕ ಸ್ವಾತಂತ್ರ್ಯೋತ್ಸವ ಸಮಿತಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದ ತಂಡಗಳಿಗೆ ಪ್ರಶಸ್ತಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಶಾಸಕರಾದ ಮಹೇಶ ಟೆಂಗಿನಕಾಯಿ, ಮಹಾಪೌರರಾದ ರಾಮಣ್ಣ ಬಡಿಗೇರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ಅಪರ ತಹಶೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಬೊಮ್ಮಕ್ಕನವರ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿದ್ದರು.
ಫಾತಿಮಾ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ರೈತರಿಗೆ ಪ್ರಸ್ತುತ ಪಡಿಸಿದರು. ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ ಸ್ವಾಗತಿಸಿದರು.