NewsNews In KannadaNorth Karnataka

ನ.25ರಂದು ಮಿನಿ ಉದ್ಯೋಗ ಮೇಳ

ಹುಬ್ಬಳ್ಳಿ, ನ.19: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲ್ಲಿ 4 ರಿಂದ 7 ಖಾಸಗಿ ರಂಗದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿಯ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ (ಮ್ಯೆಕಾನಿಕಲ್, ಇಲೆಕ್ಟಿçಕಲ್, ಏಲೆಕ್ಟಾçನಿಕ್ಸ್), ಬಿ.ಎಸ್‌ಸಿ(ಕೆಮಿಸ್ಟಿç) ಹಾಗೂ ಯಾವುದೇ ಪದವೀಧರರು ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಭಾವಚಿತ್ರ, ಆಧಾರ್ ಕಾರ್ಡ್, ಬಯೋಡೆಟಾಗಳ ಹೆಚ್ಚಿನ ಪ್ರತಿಗಳೊಂದಿಗೆ ( ಕನಿಷ್ಟ 5 ಪ್ರತಿಗಳು) ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 8105693234, 8453208555 ಕಚೇರಿ ವೇಳೆಯಲ್ಲಿ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರಾದ ಗಿರೀಶ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close