News In KannadaNorth Karnataka

ಪೊಲೀಸ್ ಉಪಾಧೀಕ್ಷಕ ಹೆಚ್.ಕೆ. ಪಠಾಣ್ ಅವರಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ

ಹುಬ್ಬಳ್ಳಿ, ಮಾ 20: ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಕೆ. ಪಠಾಣ್ ಅವರು ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಆಲಿಸಿದರು.

 

ಬಳಿಕ ಮಾತನಾಡಿದ ಅವರು, ಸಾರ್ವಜನಿಕರಿಂದ 5 ಅರ್ಜಿಗಳು ಬಂದಿವೆ. ಅದರಲ್ಲಿ 2 ಅರ್ಜಿಗಳನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಳೇ ಕೋರ್ಟ್ ನ್ಯಾಯಾಲಯದ ಮುಂದುಗಡೆ ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸುತ್ತಿರುವುದು, ನಿಯಮ ಬಾಹಿರವಾಗಿ ವಿಶ್ವೇಶ್ವರ ನಗರದ ಸರ್ಕಾರಿ ಪ್ರೌಢಶಾಲೆಗೆ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ಅಧ್ಯಕ್ಷರ ನೇಮಕ ಮಾಡಿಕೊಂಡಿರುವುದರ ಬಗ್ಗೆ, ಸಿದ್ದೇಶ್ವರ ನಗರದ ವಿಜಯನಗರ ತರಬೇತಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರ ನೇಮಕ, ಅಪಘಾತ ವಿಮೆ ಪರಿಹಾರ, ಪೊಲೀಸ್ ಕ್ವಾಟರ್ಸ್ ನಲ್ಲಿ‌ ಕ್ಷೌರಿಕ‌‌ ಅಂಗಡಿ ತೆರೆಯುವ ಕುರಿತ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಅರ್ಜಿಗಳನ್ನು ಇತ್ಯರ್ಥಗೊಳಿಸುವಂತೆ ತಿಳಿಸಲಾಗುವುದು ಎಂದು ಅವರು ತಿಳಿಸಿದರು.

 

ಸಭೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಶಿವಾನಂದ ರಾಣೆ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ್, ಅಪರ ತಹಸೀಲ್ದಾರ ಶಿವಾನಂದ ಹೆಬ್ಬಳ್ಳಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ, ಸಹಕಾರ ಅಭಿವೃದ್ಧಿ ಅಧಿಕಾರಿ ಎ.ಎಂ.ಮುಷಾಫೀರ್, ಸಹಾಯಕ ಕೃಷಿ ನಿರ್ದೇಶಕ ಆರ್.ಎ. ಅಣಗೌಡರ, ತಾಲೂಕು ಹಿಂದುಳಿದ ವರ್ಗಗಳ ವಿಸ್ತೀಣಾಧಿಕಾರಿ ಸುರೇಶ ಗುರಣ್ಣವರ, ತಾಲೂಕು ಪಂಚಾಯತ ಅಕ್ಷರ ದಾಸೋಹ ವಿಭಾಗದ ಸಹನಿರ್ದೇಶಕ ಡಾ.ಸಂಗಮೇಶ ಬಂಗಾರಿಮಠ, ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಎಸ್. ಶಿವಳ್ಳಿಮಠ, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯ ಕಮಲಾ ಬೈಲೂರ, ಸಹಾಯಕ ತೋಟಗಾರಿಕೆ ಅಧಿಕಾರಿ ಹರೀಶ ಯಕ್ಕಿಹಳ್ಳಿಮಠ, ವಲಯ ಅರಣ್ಯ ಅಧಿಕಾರಿ ಅರವಿಂದ ಕಣವಿ, ವಾಣಿಜ್ಯ ತೆರಿಗೆ ಇಲಾಖೆಯ ಸಂಗೀತಾ ಹಿರೇಮಠ, ಹೆಸ್ಕಾಂನ ಸುಜಾತ ಮಳಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Please follow and like us:

Leave a Reply

Your email address will not be published.

Back to top button
Close