NewsNews In KannadaNorth Karnataka

ಮೇ.28 ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

ಧಾರವಾಡ, ಮೇ.11: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮಹಾಪೌರ ಹಾಗೂ ಉಪಮಹಾಪೌರರನ್ನು ಚುನಾಯಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close