NewsNews In Kannada
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅಧಿಕಾರ ಸ್ವೀಕಾರ
ಹುಬ್ಬಳ್ಳಿ, ಆ.17: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರು ಅಧಿಕಾರ ಸ್ವೀಕರಿಸಿದರು.
ನಂತರ ಮಾತನಾಡಿದ ಪೀರಸಾಬ ಕೌತಾಳ ಅವರು, ಸಂಸ್ಥೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರದ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ.ಎಂ, ಇಲಾಖಾ ಮುಖ್ಯಸ್ಥರಾದ ವಿವೇಕಾನಂದ ವಿಶ್ವಜ್ಞ, ಪಿ.ವೈ.ನಾಯಕ, ಬಿ.ಬೋರಯ್ಯ, ವಿಜಯಶ್ರೀ ನರಗುಂದ, ಮಾಲತಿ.ಎಸ್.ಎಸ್, ಜಗದಂಬಾ ಕೋಪರ್ಡೆ, ಬಸವರಾಜ ಅಮ್ಮನ್ನವರ, ಗಣೇಶ ರಾಠೋಡ, ಇಸ್ಮಾಯಿಲ್ ಕಂದಗಲ್, ಶ್ರೀನಾಥ.ಜಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
******