News In KannadaNorth Karnataka

ಸಾರ್ವಜನಿಕರ ಕುಂದುಕೊರತೆ ಆಲಿಸಿದ ಪೊಲೀಸ್ ಉಪಾಧೀಕ್ಷಕ ಹೆಚ್.ಕೆ. ಪಠಾನ

ಹುಬ್ಬಳ್ಳಿ , ಜ18: ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ತಾಲೂಕು ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರೆತೆ ಸಭೆಯಲ್ಲಿ ಪೊಲೀಸ್ ಉಪಾಧೀಕ್ಷಕ ಹೆಚ್ .ಕೆ. ಪಠಾನ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಗೆ ಸಂಬAಧಿಸಿದ ಯೋಜನೆಗಳ ಕುರಿತು ಇಲಾಖಾಧಿಕಾರಿಗಳು ಗ್ರಾಮ ಸಭೆಗಳನ್ನು ಏರ್ಪಡಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಯ ವಿಳಂಬ ಮಾಡದೇ ತ್ವರಿತವಾಗಿ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ಕಾರ್ಯ ನಿರ್ವಹಿಸಿ ಎಂದರು.

ಯಾವುದೇ ಸರ್ಕಾರಿ ಕಛೇರಿಯಲ್ಲಿ ಸಾರ್ವಜನಿಕ ನೌಕರರು ಕೆಲಸ ಮಾಡಿಕೊಡಲು ವಿಳಂಬ ಮಾಡುತ್ತಿದ್ದರೆ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ಮಾಡುತ್ತಿದ್ದರೆ, ಕಳಪೆ ಕಾಮಗಾರಿ, ಹಣ ದುರುಪಯೋಗದಂತಹ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಲಿಖಿತವಾಗಿ ಮತ್ತು ಮೌಖಿಕವಾಗಿ ದೂರಗಳನ್ನು ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಜುಬ್ಲಿ ಸರ್ಕಲ್ ಕೆ.ಸಿ.ಡಿ.ರಸ್ತೆ, ಹತ್ತಿರ ಧಾರವಾಡ ಕಛೇರಿ ದೂರವಾಣಿ ಸಂಖ್ಯೆ: 0836-295751 ಅಥವಾ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಕೆಸಿ.ಡಿ ಸರ್ಕಲ್ ಗಣಪತಿ ಗುಡಿ ಹಿಂಭಾಗ ಧಾರವಾಡ ದೂರವಾಣಿ ಸಂಖ್ಯೆ: 0836-2791000 ಗೆ ಸಂಪರ್ಕಿಸಬಹುದಾಗಿದೆ ಎಂದರು.

ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಮಾತನಾಡಿ, ವಿದ್ಯಾರ್ಥಿಗಳ ಶಿಷ್ಯವೇತನವು ನಿಗದಿತ ಅವಧಿಯೊಳಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಪೊಲೀಸ್ ನಿರೀಕ್ಷಕ ಬಿ.ಎಮ್. ಅವಟಿ ಮಾತನಾಡಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬAಧಪಟ್ಟ ಯೋಜನೆಗಳ ಕುರಿತು ಮಾಹಿತಿ ಒದಗಿಸಿದರು. ಈ ವೇಳೆ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿಜಯಕುಮಾರ ರ‍್ಯಾಗಿ, ಅರಣ್ಯ ಇಲಾಖೆ ಅಧಿಕಾರಿಗಳಾದ ಅರವಿಂದ ಕಣವಿ, ಎಸ್.ಎಮ್. ತೆಗ್ಗಿನಮನಿ, ಸಹಾಯಕ ಕೃಷಿ ನಿರ್ದೇಶಕ ಆರ್.ಎ. ಅಣಗೌಡರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಅಧಿಕಾರಿ ಜಗದೀಶ ಪಾಟೀಲ, ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕಿರಣಕುಮಾರ ಬಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Please follow and like us:

Leave a Reply

Your email address will not be published.

Back to top button
Close