News

ಹಿರಿಯರನ್ನು ಕಡೆಗಣಿಸಿದ ಬಗ್ಗೆ ನಾವೂ ಪಕ್ಷದ ಚೌಕಟ್ಟಿನೊಳಗೆ ಮಾತನಾಡುತ್ತೇವೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಸೇವಾಸದನದ ಮತಗಟ್ಟೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು.

ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಮತದಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಇದೆ. 82 ಸ್ಥಾನಗಳಲ್ಲಿ 60 ಕ್ಕೂ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತೇವೆ. ಟಿಕೆಟ್ ಆಕ್ಷಾಂಕಿಗಳ ಮಧ್ಯೆ ಸಾಕಷ್ಟು ಪೈಪೋಟಿ ಇತ್ತು. 700 ಕ್ಕೂ ಹೆಚ್ಚು ಜನರು ಆಕ್ಷಾಂಕಿಗಳು ಇದ್ದರು. ಕೆಲವು ಕಡೆ ಬಂಡಾಯಕೋರರು ಸ್ಪರ್ಧೆ ಮಾಡಿದ್ದಾರೆ. ಅವರ ವಿರುದ್ದ ಕ್ರಮ‌ಕೈಗೊಂಡಿದ್ದೇವೆ ಎಂದರು.

ಬಂಡಾಯಗಾರರಿಗೆ ಜನರಿಗೆ ಬೆಂಬಲ ನೀಡಿಲ್ಲ. ಬೆಲೆ ಏರಿಕೆ ಬೇರೆ ಬೇರೆ ಸರ್ಕಾರ ಇದ್ದಾಗಲೂ ಆಗಿದೆ. ಬೆಲೆ ಏರಿಕೆ ಈ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ.‌ ಗೂಂಡಾಗಿರಿ, ಒತ್ತಡ ಹಾಕಿದರು ಬಂಡಾಯಗಾರರು ಗೆಲುವು ಸಾಧಿಸಲ್ಲ. ಬಂಡಾಯ ಅಭ್ಯರ್ಥಿಗಳು ಯಾರು ಗೆಲುವು ಸಾಧಿಸಲ್ಲ ಎಂದರು.

Please follow and like us:

Leave a Reply

Your email address will not be published.

Back to top button
Close