NewsNews In Kannada

ಉಕ್ರೇನ್‌‌ನಿಂದ ರಾಜ್ಯಕ್ಕೆ ಆಗಮಿಸಿದ ವಿದ್ಯಾರ್ಥಿಗಳು

ಹುಬ್ಬಳ್ಳಿ : ಯುದ್ಧಪೀಡಿತ ಉಕ್ರೇನ್‌ನಿಂದ ವಿದ್ಯಾರ್ಥಿಗಳಾದ, ಹುಬ್ಬಳ್ಳಿಯ ನಾಜಿಲ್ಲಾ ಗಾಜಿಪುರ್, ಧಾರವಾಡ ಸಪ್ತಾಪುರದ ಮಿಲನ್ ದೇವಮಾನೆ, ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಾಗವಾಡದ ವಿನಾಯಕ ನೇಮಗೌಡ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿ‌ನ ಸುನಗ ಗ್ರಾಮದ ಸಹನಾ ಪಾಟೀಲ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದರು. ಧಾರವಾಡ ಜಿಲ್ಲಾಡಳಿತದ ವತಿಯಿಂದ ರಾಜ್ಯಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮದಲ್ಲಿ ಲಡಾಖ್ ಸಂಸದ ಜಮ್‌ಯಾಂಗ್ ಸೆರಿಂಗ್ ನಂಗ್ಯಾಲ್ ಭಾಗವಹಿಸಿ, ಕೇಂದ್ರ ಸರ್ಕಾರದ “ಆಪರೇಷನ್ ಗಂಗಾ” ಕಾರ್ಯಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಕರೆ ಮಾಡಿ ಅಭಿನಂದನೆ ತಿಳಿಸಿದರು.

ಭಾರತ ಸರ್ಕಾರ ತನ್ನ ದೇಶದ ನಾಗರಿಕರ ರಕ್ಷಣೆಗೆ ಸದಾ ಬದ್ಧವಾಗಿದೆ. ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲಿಕಿರುವ ನಾಗರಿಕರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಇಚ್ಛಾಶಕ್ತಿ ಈ ಕಾರ್ಯಕ್ಕೆ ಪ್ರೇರಣೆ. ಧಾರವಾಡ ಜಿಲ್ಲಾಡಳಿತ ನಿರಂತರವಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂಪರ್ಕದಲ್ಲಿದ್ದು ಒಳ್ಳೆಯ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹುಬ್ಬಳ್ಳಿ ತಹಶೀಲ್ದಾರ ಶಶಿಧರ ಮಾಡ್ಯಾಳ ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಸುರಕ್ಷಿತವಾಗಿ ತಲುಪಿರುವ ಕುರಿತು ಮಾಹಿತಿ ನೀಡಿದರು. ಕೇಂದ್ರ ಸರ್ಕಾರದ ನೆರವಿಗೆ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ತಹಶಿಲ್ದಾರರ ಪ್ರಕಾಶ್ ನಾಶಿ, ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಸೇರಿದಂತೆ ಮತ್ತಿತರು ಇದ್ದರು.

Please follow and like us:

Leave a Reply

Your email address will not be published.

Back to top button
Close