NewsNews In Kannada

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಹಾಗೂ ಉಪಚುನಾವಣೆ: ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಆದ್ದರಿಂದ ಡಿ.25 ರಂದು ಸಂಜೆ 5-ಗಂಟೆಯಿಂದ ಡಿ.27 ರ ಸಂಜೆ 5 ಗಂಟೆವರೆಗೆ ಮತದಾನ ಜರುಗಲಿರುವ ಒಟ್ಟು 15 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮದ್ಯದ ಅಂಗಡಿ, ಬಾರ್ ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಾಣೆ, ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಶುಷ್ಕ ದಿವಸವೆಂದು ಮಾರ್ಪಡಿಸಿ ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಉಪ ಅಧೀಕ್ಷಕರು ಹಾಗೂ ವಿಚಕ್ಷಕದಳದ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close