NewsNews In KannadaNorth Karnataka

ಜಿಲ್ಲೆಯಲ್ಲಿ 14 ಸಖಿ, 7 ವಿಶೇಷ ಚೇತನರ, 7 ಯುವ ಮತ್ತು 6 ಸಾಂಪ್ರದಾಯಿಕ ಮತಗಟ್ಟೆಗಳ ಸ್ಥಾಪನೆಗೆ ಸಿದ್ಧತೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಧಾರವಾಡ, ಮೇ.03 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ.10 ರಂದು ಜರುಗುವ ಮತದಾನ ಹೆಚ್ಚಳಕ್ಕೆ ಭಾರತ ಚುನಾವಣಾ ಆಯೋಗದ ನಿರ್ದೇಶನದಲ್ಲಿ ಧಾರವಾಡ ಜಿಲ್ಲಾ ಆಡಳಿತವು ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಆಯ್ದ ಮತಗಟ್ಟೆಗಳನ್ನು ವಿಶೇಷವಾಗಿ ರೂಪಿಸಲು ಕ್ರಮ ಕೈಗೊಂಡಿದ್ದು, ಮಹಿಳಾ ಸ್ನೇಹಿಯಾದ 14 ಸಖಿ, ವಿಕಲಚೇತನರನ್ನು ಪ್ರೇರೆಪಿಸುವ 7 ಪಿಡಬ್ಲ್ಯೂಡಿ ಮತಗಟ್ಟೆ, ಯುವಕರನ್ನು ಆಕರ್ಷಿಸುವ 7 ಯುವ ಮತಗಟ್ಟೆ ಮತ್ತು ಸಾಂಪ್ರದಾಯಿಕತೆಯನ್ನು ಸಾರುವ 6 ಏಥ್ನಿಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಯಾ ಚುನಾವಣಾಧಿಕಾರಿಗಳು ತಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ಈ ವಿಶೇಷ ಮತಗಟ್ಟೆಗಳನ್ನು ಜಿಲ್ಲಾ ಸ್ವೀಪ್ ಸಮಿತಿಯ ಮಾರ್ಗದರ್ಶನ ಮತ್ತು ತಾಲೂಕಾ ಪಂಚಾಯತ್ಗಳ ಸಹಕಾರದಲ್ಲಿ ಸ್ಥಾಪಿಸಲಾಗುತ್ತಿದೆ. ಕಳೆದ ಚುನವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗಮನಲ್ಲಿಟ್ಟುಕೊಂಡು ಮತ್ತು ಮತದಾರರಲ್ಲಿ ವಿಶೇಷ ಆಸಕ್ತಿ ಹಾಗೂ ಗಮನ ಸೆಳೆಯಲು ಈ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿವೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ನೊಂದಾಯಿತರಾಗಿರುವ ಪ್ರತಿಯೊಬ್ಬ ಮತದಾರರು ತಪ್ಪದೇ ಮೇ.10 ರಂದು ಮತದಾನ ಮಾಡಬೇಕು. ಪ್ರತಿ ಸಲಕ್ಕಿಂತ ಈ ಬಾರಿ ಹೆಚ್ಚು ಶೇಕಡಾವಾರು ಮತದಾನವಾಗಲು ಜನರಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close