News In KannadaNorth Karnataka

ಜ.23ಕ್ಕೆ ಬೃಹತ್ ಕಾರ್ ಹಾಗೂ ಬೈಕ್ ರ‍್ಯಾಲಿ

ಹುಬ್ಬಳ್ಳಿ , ಜ.21: ಸಾರಿಗೆ ಇಲಾಖೆ ವತಿಯಿಂದ ಜನೇವರಿ 17 ರಿಂದ 23ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಸ್ವಚ್ಛತೆಗೆ ಪ್ರಾಧಾನ್ಯತೆ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ, ರೋಟರಿ ಕ್ಲಬ್, 99-ಕ್ಯಾನನ್ ಮೋಟಾರ್ ಸೈಕಲ್ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್ ಹಾಗೂ ಹುಬ್ಬಳ್ಳಿ ಧಾರವಾಡ ಮೋಟರ್ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಇವುಗಳ ಸಹಯೋಗದೊಂದಿಗೆ ಜನೇವರಿ 23 ರಂದು ಬೆಳಿಗ್ಗೆ 9 ಗಂಟೆಗೆ ಬೈಕ್ ಮತ್ತು ಕಾರ್ ರ‍್ಯಾಲಿಯನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದೆ.

ರ‍್ಯಾಲಿಯು ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಪ್ರಾರಂಭವಾಗಿ ಚೆನ್ನಮ್ಮಾ ಸರ್ಕಲ್, ಹೊಸೂರು, ಶಿರೂರ ಪಾರ್ಕ ರಸ್ತೆ ಮಾರ್ಗವಾಗಿ ತೋಳನಕೆರೆಯಲ್ಲಿ ಮುಕ್ತಾಯಗೊಳ್ಳಲಿದೆ. ರ‍್ಯಾಲಿಯಲ್ಲಿ ಪೊಲೀಸ್ ಆಯುಕ್ತರು, ಉಪ ಪೊಲೀಸ್ ಆಯುಕ್ತರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published.

Back to top button
Close