NewsNews In KannadaNorth Karnataka

ನಾಳೆ ಒಂದು ದಿನ ಮಾತ್ರ ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ; ಪಿಯುಸಿ,ಪದವಿ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಗುರುದತ್ತ ಹೆಗಡೆ

ಧಾರವಾಡ, ಜ. 11: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವದರಿಂದ ಮತ್ತು ಮಾನ್ಯ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಸುತ್ತಿರುವದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.

 

ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ದಿನಾಂಕ- 12:01:2023 ರ ಗುರುವಾರದಂದು ಮಾತ್ರ ಒಂದು ದಿನ ರಜೆ ಘೋಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವದಿಲ್ಲ, ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Please follow and like us:

Leave a Reply

Your email address will not be published.

Back to top button
Close