NewsNews In KannadaNorth Karnataka

ಪಹಲ್ಗಾಂಮ್‍ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಮೃತದೇಹಗಳನ್ನು ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ ಲಾಡ್ ನೆರವು

ಧಾರವಾಡ, ಏ.24: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋμï ಲಾಡ್ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ.

ಪಹಲ್ಗಾಮ್‍ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋμï ಲಾಡ್ ಅವರೇ ತಿಳಿಸುತ್ತಿದ್ದಾರೆ.

“ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್ ಅವರು ತಿಳಿಸಿದ್ದಾರೆ.

Please follow and like us:
Pin Share

Leave a Reply

Your email address will not be published.

Back to top button
Close