NewsNews In KannadaNorth Karnataka
ಪ್ರತಿ ಗ್ರಾಮ ಪಂಚಾಯತ ಗ್ರಂಥಾಲಯಗಳಿಗೆ 500 ಪುಸ್ತಕ ವಿತರಣೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಡಿ.11: ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ಗ್ರಂಥಾಲಯ ಪುಸ್ತಕ, ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ವಿತರಿಸಿದರು.
ನಂತರ ಮಾತನಾಡಿದ ಅವರು, ಇಂದು ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿದೆ. ತಾಲೂಕುಗಳಲ್ಲಿರುವ ವಸತಿ ನಿಲಯಗಳಿಗೆ ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತ ಗ್ರಂಥಾಲಯಗಳಿಗೆ 500 ಪುಸ್ತಕಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಕಲಘಟಗಿ ಹಾಗೂ ಧಾರವಾಡ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಇತರರು ಉಪಸ್ಥಿತರಿದ್ದರು.
