NewsNews In KannadaNorth Karnataka

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ;

ಅ.29 ರಂದು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ

ಧಾರವಾಡ, ಅ.26:ಗ್ರಾಮೀಣ, ನಗರ ಪ್ರದೇಶಗಳಲ್ಲಿರುವ ಯುವಜನರಿಗೆ ಸ್ವ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮವನ್ನು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಜಿಲ್ಲೆಯಾದ್ಯಂತ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

 

ಈ ಕಾರ್ಯಕ್ರಮವನ್ನು ಧಾರವಾಡ ನಗರ, ಜಿಲ್ಲೆ ಹಾಗೂ ತಾಲೂಕಿನಲ್ಲಿ ಬರುವ ವಿವಿಧ ಗ್ರಾಮಗಳ ಯುವ ಜನರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಪಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅ.29 ರಂದು ಬೆಳಿಗ್ಗೆ 10-30 ಗಂಟೆಗೆ ಧಾರವಾಡದ ಗಾಂಧೀನಗರದಲ್ಲಿರುವ ಗ್ರಾಮೀಣಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ರುಡ್‌ಸೆಟ್ ದಲ್ಲಿ ಹಮ್ಮಿಕೊಳ್ಳಲಾಗಿದೆ.

 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗಾಮೋದ್ಯೋಗ ಅಧಿಕಾರಿಗಳು, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಡಿ.ಸಿ. ಕಂಪೌಂಡ, ಧಾರವಾಡ ದೂ.ಸಂ: 0836-2442066 3.0:9480825622 ಕರೆ ಮಾಡಿ ಮಾಹಿತಿ ಪಡೆಯಬಹುದೆಂದು ಜಿಲ್ಲಾ ಮತ್ತು ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
Pin Share

Leave a Reply

Your email address will not be published.

Back to top button
Close