News In KannadaNorth Karnataka

ಮಳೆ ಬಾಧಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಭೇಟಿ ಪರಿಶೀಲನೆ

ಹುಬ್ಬಳ್ಳಿ , ಅ. 11: ಇಂದು ಹಳೆ ಹುಬ್ಬಳ್ಳಿಯ ನಾರಾಯಣ ಸೋಫಾ, ಬ್ಯಾಹಟ್ಟಿ ಪ್ಲಾಟ್ ಹಾಗೂ ಇತರ ಮಳೆ ಬಾಧಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಸಚಿವ ಹಾಲಪ್ಪ ಆಚಾರ್ ಅವರು,
ನಿನ್ನೆ ಸುರಿದ ಮಳೆಗೆ ನಗರದಲ್ಲಿನ ರಾಜ ಕಾಲುವೆ ತುಂಬಿ ಹರಿದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಎರಡು ದಿನದಲ್ಲಿ ರಾಜಕಾಲುವೆ ಹೂಳು ಮತ್ತು ಇತರ ವಿಷಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸುವೆ. ರೂ. 120 ಕೋಟಿ ವೆಚ್ಚದಲ್ಲಿ ನಾಲಾಗೆ ತಡೆಗೋಡೆಯನ್ನು ಉಣಕಲ್ ನಿಂದ ನಿರ್ಮಿಸಿಕೊಂಡು ಬರಲಾಗುತ್ತಿದೆ‌. ಕಾಲುವೆ ಒತ್ತುವರಿಯಾಗಿದ್ದರೆ ಸರ್ವೇ ಕಾರ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ರಾಜ ಕಾಲುವೆ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದು ಅಗತ್ಯವಿದೆ. ಸರ್ಕಾರದಿಂದ ಮನೆ ಹಾನಿಗೆ ಒಳಗಾದವರಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ಮಳೆಯಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ನಿನ್ನೆ ರಾತ್ರಿಯಿಂದಲೇ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ರಾಜ ಕಾಲುವೆಯ ತಡೆಗೋಡೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಬೇಕಾಗಿದೆ. ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ಹಾನಿ ಆಗುವುದಿಲ್ಲ‌. ನಾಲಾದ ಹೂಳು ತೆಗೆಯುವಂತೆ ಎರಡು ಬಾರಿ ಪಾಲಿಕೆ ಅಧಿಕಾರಿಗಳ ಜೊತೆ ಸಭೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Please follow and like us:

Leave a Reply

Your email address will not be published.

Back to top button
Close