ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಬಿಜೆಪಿ ಅಭ್ಯರ್ಥಿ ಘೋಷಣೆ

ಹುಬ್ಬಳ್ಳಿ,ಮೇ 28: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಹಿನ್ನಲೆ ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಧಾರವಾಡದ ಈರೇಶ್ ಅಂಚಟಗೇರಿ ಅವರ ಹೆಸರನ್ನು ಘೋಷಣೆ ಮಾಡಿದೆ.
ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿಗಳು ಆಗಮಿಸಿದ್ದಾರೆ. ಶಾಸಕ ಅಮೃತ ದೇಸಾಯಿ ಸೇರಿದಂತೆ ಬಿಜೆಪಿ ಪ್ರಮುಖರ ಜೊತೆ ಮೇಯರ್ ಸ್ಥಾನಕ್ಕೆ ಈರೇಶ್ ಅಂಚಟಗೇರಿ, ಉಪಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಮಹಾನಗರ ಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈ ಬಿಜೆಪಿ ಅಭ್ಯರ್ಥಿ ಆಯ್ಕೆಗು ಮುನ್ನ ಬಿಜೆಪಿ ಸಭೆಗಳ ಮೇಲೆ ಸಭೆ ನಡೆಸಿತು. ನಿನ್ನೆ ತಡರಾತ್ರಿ ವರೆಗೂ ಬಿಜೆಪಿ ನಡೆದ ಸಭೆ ನಡೆಸಿತ್ತು. ಇಂದು ಬೆಳಿಗ್ಗೆ ಮತ್ತೆ ಬಿಜೆಪಿ ಕೋರ್ ಕಮಿಟಿ ಹುಬ್ಬಳ್ಳಿ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿತ್ತು. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಮತ್ತು ಅರವಿಂದ ಬೆಲ್ಲದ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಿದ ಬಿಜೆಪಿ ನಾಯಕರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದ ಈರೇಶ್ ಅಂಚಟಗೇರಿ ಅವರನ್ನು ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಮತ್ತು ಉಪ ಮೇಯರ ಅಭ್ಯರ್ಥಿಯಾಗಿ ಉಮಾ ಮುಕುಂದ ಘೋಷಣೆ ಮಾಡಿದ್ದಾರೆ.

