News In Kannada
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ಹುಬ್ಬಳ್ಳಿ: 2020- 21ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜರುಗಲಿವೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಮರಳಿ ಬರುವಾಗ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ,ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
