News

9 ರಿಂದ 12 ನೇ ತರಗತಿಗಳ ಪುನರಾರಂಭ: ಸುಗಮ,ಸುರಕ್ಷಿತ ಕಲಿಕೆಗೆ ಒತ್ತು ನೀಡಲು ಜಿಲ್ಲಾಧಿಕಾರಿಗಳ ಕರೆ

ಹುಬ್ಬಳ್ಳಿ: ಸುಮಾರು 18 ತಿಂಗಳ ನಂತರ  ಶಾಲೆ,ಕಾಲೇಜುಗಳು ಪುನರಾರಂಭವಾಗುತ್ತಿವೆ. ವಿದ್ಯಾರ್ಥಿಗಳು ಶುಚಿತ್ವ ಮತ್ತು ಆರೋಗ್ಯ ಸುರಕ್ಷತೆಯ ಕ್ರಮಗಳೊಂದಿಗೆ ಕಲಿಕೆಗೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರೆ ನೀಡಿದರು.

ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿಂದು 9 ರಿಂದ 12 ನೇ ತರಗತಿಗಳ ಪುನರಾರಂಭದ ಸಂದರ್ಭದಲ್ಲಿ  ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಮಾಸ್ಕ್ ವಿತರಿಸಿ, ಹೂವು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿಗಳು,  ಸುಮಾರು ಒಂದೂವರೆ ವರ್ಷದ ನಂತರ ವಿದ್ಯಾರ್ಥಿಗಳು ತರಗತಿಗಳಲ್ಲಿ ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿದೆ.ಆದರೆ ವಿದ್ಯಾರ್ಥಿಗಳು ಕೋವಿಡ್ ಸುರಕ್ಷತಾ ನಿಟ್ಟಿನಲ್ಲಿ ಮೈ ಮರೆಯಬಾರದು . ಪದೇ ಪದೇ ಸೋಪಿನಿಂದ ಕೈ ತೊಳೆಯುವ,ಸ್ಯಾನಿಟೈಸರ್ ಬಳಸುವ ,ಮಾಸ್ಕ್ ಧರಿಸುವದನ್ನು ಕಡ್ಡಾಯವಾಗಿ ಪಾಲಿಸಬೇಕು.ಕಣ್ಣು,ಮೂಗು,ಬಾಯಿ ಮುಟ್ಟಿಕೊಳ್ಳಬಾರದು.ಶಾಲೆಗಳ,ತರಗತಿಗಳ ಪುನರಾರಂಭ ಸಂತೋಷದಾಯಕವಾಗಿದೆ.ಭವಿಷ್ಯ ಉಜ್ವಲವಾಗಿಸಿಕೊಳ್ಳಲು ದೊಡ್ಡ ಗುರಿ ಹೊಂದಿರಬೇಕು.ಆಸಕ್ತಿದಾಯಕ ವಿಷಯಗಳನ್ನು ಗುರುತಿಸಿಕೊಂಡು ಆ ರಂಗದಲ್ಲಿಯೇ ಉತ್ತಮ ಸಾಧನೆ ಮಾಡಲು ಗಮನ ಕೇಂದ್ರೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸನ್ಮಾನ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಭೌತಶಾಸ್ತ್ರ,ರಸಾಯನಶಾಸ್ತ್ರ ,ಜೀವಶಾಸ್ತ್ರ ಪ್ರಯೋಗಾಲಯಗಳು,ಗ್ರಂಥಾಲಯ ಅಭಿವೃದ್ಧಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲು ಠೇವಣಿ ಸೇರಿ ಒಟ್ಟು 5 ಲಕ್ಷ ರೂ.ಕಾಣಿಕೆ  ನೀಡಿದ ಗಾಮನಗಟ್ಟಿಯ ವಿರೇಶಶಾಸ್ತ್ರಿ ಶಾಸ್ತ್ರಿಮಠ, ಅನ್ನಪೂರ್ಣ ಶಾಸ್ತ್ರಿಮಠ ದಂಪತಿಗಳಿಗೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸನ್ಮಾನಿಸಿದರು.

ಜಿಲ್ಲೆಯ 108 ಸರ್ಕಾರಿ ,146 ಅನುದಾನಿತ ಹಾಗೂ 162 ಅನುದಾನರಹಿತ ಸೇರಿ ಒಟ್ಟು 416 ಪ್ರೌಢಶಾಲೆಗಳ 9 ನೇ ತರಗತಿಯ 30,805 ಹಾಗೂ 10 ನೇ ತರಗತಿಯ 33,148 ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿದ್ದಾರೆ. 27 ಸರ್ಕಾರಿ,39 ಅನುದಾನಿತ ಹಾಗೂ 110 ಅನುದಾನರಹಿತ ಸೇರಿ 176 ಪದವಿಪೂರ್ವ ಕಾಲೇಜುಗಳು ಪುನರಾರಂಭವಾಗಿವೆ.

Please follow and like us:
Pin Share

Leave a Reply

Your email address will not be published.

Back to top button
Close