NewsNews In KannadaNorth Karnataka

ಶಿಕ್ಷಕರ ಕ್ಷೇತ್ರ ಚುನಾವಣೆ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯ ತಂಡ ರಚನೆ

ಧಾರವಾಡ,ಮೇ.27: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 13 ರಂದು ಮತದಾನ ನಡೆಯಲಿದೆ. ಜಿಲ್ಲೆಯ 21 ಮತಗಟ್ಟೆಗಳಲ್ಲಿ ಕುಡಿಯುವ ನೀರು, ರ್ಯಾಂಪ್, ಪೀಠೋಪಕರಣ, ವಿದ್ಯುತ್, ಶೌಚಾಲಯ ಮತ್ತಿತರ ಮೂಲಭೂತ ಸೌಕರ್ಯಗಳು, ಮತಗಟ್ಟೆಗಳ ಅಳತೆ, ಕ್ಲಸ್ಟರ್, ಮಾರ್ಗನಕ್ಷೆ, ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆ ನಡುವಿನ ಅಂತರ ಮತ್ತಿತರ ಮಾಹಿತಿಗಳ ನಮೂದು ಹಾಗೂ ಪರಿಶೀಲನೆಗಾಗಿ ಗ್ರಾಮ ಪಂಚಾಯತ, ನಗರ ಸ್ಥಳೀಯ ಸಂಸ್ಥೆಗಳು, ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ 21 ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ತಂಡಗಳು ತಮಗೆ ವಹಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕು, ಮತದಾನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗೆ ವಸತಿಯೋಗ್ಯ ಕೊಠಡಿ ವ್ಯವಸ್ಥೆ ಪರಿಶೀಲಿಸಬೇಕು. ಕೋವಿಡ್-19 ಸೋಂಕಿತರು ಮತದಾನಕ್ಕೆ ಬಂದರೆ ಪ್ರತ್ಯೇಕ ಕೋಣೆ ಗುರುತಿಸಬೇಕು. ಮತಗಟ್ಟೆಯ ದುರಸ್ತಿ ಅಗತ್ಯವಿದ್ದರೆ ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
Pin Share

Leave a Reply

Your email address will not be published.

Back to top button
Close