ವಿಶ್ವ ಪರಿಸರದ ದಿನ: ಶಿರಡಿನಗರದಲ್ಲಿ ಸಸಿ ನೆಡುವ ಕಾರ್ಯಕ್ರಮ

ಹುಬ್ಬಳ್ಳಿ , ಜೂನ್ 05:ಹುಬ್ಬಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿರಡಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು.
ವಿವಿಧ ಜಾತಿಯ 50 ಸಸಿಗಳನ್ನು ನೆಡಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಗಂಗಾದರ ಕಂದಕೂರ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಪ್ರತಿಯೊಬ್ಬರು ಗಿಡನೆಟ್ಟು ಬೆಳಸಬೇಕಾಗಿದೆ.ಮುಂದಿನ ಮನುಕುಲಕ್ಕೆ ಶುದ್ಧವಾದ ಗಾಳಿ ಸಿಗಬೇಕಾದರೆ ಪರಿಸರ ಸಂರಕ್ಷಣೆ ಕಾರ್ಯ ಬಹಳ ಮುಖ್ಯವಾಗಿದೆ ಎಂದು ತಿಳಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಮ್.ಎಸ್. ಶಿವಳ್ಳಿಮಠ, ಸರಕಾರಿ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎನ್.ಯು. ಬದ್ದಿ, ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಮ್.ಎಚ್ ಜಂಗಳಿ, ಕಚೇರಿಯ ಶಿಕ್ಷಣ ಸಂಯೋಜಕರಾದ ಲೋಕೇಶ.ಡಿ, ಪ್ರಭಾಕರ ಜಿ, ಬಿ.ಆರ್.ಪಿ. ಗಳಾದ ಅನುರಾಧಾ. ಕೆ, ವಿಜಯಲಕ್ಷ್ಮೀ, ಎಮ್.ಎಸ್ ಸಮದಹಳ್ಳಿ, ಎಸ್ಡಿಎಂಸಿ ಅಧ್ಯಕ್ಷೆ ಮಂಜುಳಾ,ಶಾಲೆಯ ಮುಖ್ಯಶಿಕ್ಷಕರಾದ ಜಿ.ಎಲ್ ಕಬ್ಬೇರ, ಸಿ.ಆರ್.ಪಿ ಗಳು,ಬಿ.ಐ.ಆರ್.ಟಿ ಯವರು,ಎಸ್.ಡಿ.ಎಮ್.ಸಿ ಸದಸ್ಯರು, ಶಿಕ್ಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
