NewsNews In KannadaNorth Karnataka
ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ
ಹುಬ್ಬಳ್ಳಿ, ಡಿ.17: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ವಸತಿ ಸಹಿತ, ವಸತಿ ರಹಿತವಾಗಿ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು.
ಅರ್ಹ ಫಲಾನುಭವಿಗಳು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 0836-2332128 ಹಾಗೂ ತರಬೇತಿ ಕೇಂದ್ರದ ಚಾಲಕ ಬೋಧಕರ ದೂರವಾಣಿ ಸಂಖ್ಯೆ 9739166885, 6362767729, 9945756620, 7892577892 ಸಂಪರ್ಕಿಸುವAತೆ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.