News In Kannada
Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper
-
ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿ ಮಾಧ್ಯಮ ಕಾರ್ಯಾಗಾರ ಸಂವಾದ
ಧಾರವಾಡ, ಫೆ.09: ಕರ್ನಾಟಕ ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ರಾಯಾಪುರದಲ್ಲಿ ಇಂದು ನವೀಕರಿಸುಬಹುದಾದ ಇಂಧನ ಮತ್ತು ಉಳಿತಾಯ ಕುರಿತ ಮಾಧ್ಯಮ ಕಾರ್ಯಾಗಾರ ಮತ್ತು ಸಂವಾದ…
Read More » -
ಧಾರವಾಡ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ
ಧಾರವಾಡ, ಫೆ.07: ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುರೇಶ ಇಟ್ನಾಳ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಹಿಂದಿನ ಸಿಇಓ ಡಾ.ಸುಶೀಲಾ ಬಿ.…
Read More » -
ಭಾವೈಕ್ಯತೆಯ ರಾಯಭಾರಿ ಇಬ್ರಾಹಿಂ ಸುತಾರ ನಿಧನಕ್ಕೆ ಜಗದೀಶ್ ಶೆಟ್ಟರ್ ಕಂಬನಿ
ಹುಬ್ಬಳ್ಳಿ: ಹಿಂದು-ಮುಸ್ಲಿಂ ಭಾವೈಕ್ಯತೆಯ ರಾಯಭಾರಿಯಾಗಿ, ಕನ್ನಡ ನಾಡಿನ ಸಂತ ಕಬೀರ ಎಂದು ಹೆಸರುವಾಸಿಯಾಗಿದ್ದ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಇಬ್ರಾಹಿಂ ಸುತಾರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಕಂಬನಿ ಮಿಡಿದಿದ್ದಾರೆ. ಇಬ್ರಾಹಿಂ ಸುತಾರ ಸರ್ವಧರ್ಮ ಪ್ರವಚನಗಳಿಗೆ ಹೆಸರಾಗಿದ್ದರು. ಬಾಲ್ಯದಲ್ಲಿ ಕುರಾನ್, ಭಜನೆ, ತತ್ವಪದ, ವಚನಗಳನ್ನು ಕಲಿತ ಅವರು, ನಂತರ ಉಪನಿಷತ್ ಹಾಗೂ ಭಗವದ್ಗೀತೆಯ ಅಧ್ಯಯನ ಮಾಡಿದರು. ಪ್ರಾಥಮಿಕ ಶಿಕ್ಷಣ ಮಾತ್ರ ಪಡೆದಿದ್ದ ಇಬ್ರಾಹಿಂ ಸುತಾರ ಜೀವನಾನುಭವದಿಂದ ಧಾರ್ಮಿಕ ಅಂತಃಸತ್ವಗಳನ್ನು ಕಂಡುಕೊಂಡರು. ಧರ್ಮ, ದೇವರು, ಆರಾಧನೆಯ ವಿಧಾನ ಬೇರೆ ಬೇರೆಯಾದರು ಅಂತಿಮ ಸತ್ಯ ಒಂದೇ. ಎಲ್ಲಾ …
Read More » -
ಕ್ಯಾನ್ಸರ್ ಜಾಗೃತಿಗಾಗಿ ವಾಕಥಾನ್
ಹುಬ್ಬಳ್ಳಿ: ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಕಿಮ್ಸ್ ಕ್ಯಾನ್ಸರ್ ವಿಭಾಗಹಾಗೂ ಹುಬ್ಬಳ್ಳಿ ಐಎಂಎ ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿಗಾಗಿ ವಾಕ್‌ಥಾನ್ ನಡೆಸಲಾಯಿತು. ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ವಾಕ್‌ಥಾನ್‌ಗೆ ಚಾಲನೆ ನೀಡಿದರು. ಹುಬ್ಬಳ್ಳಿ ಐಎಂಎ ಅಧ್ಯಕ್ಷ ಡಾ.ಎಸ್.ವೈ.ಮುಲ್ಕಿಪಾಟೀಲ್, ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನರ್ಸಿಂಗ್ ಸಿಬ್ಬಂದಿ, ವೈದ್ಯಕೀಯ ಹಾಗೂ ಅರೆವೈದ್ಯಕೀಯ ವಿದ್ಯಾರ್ಥಿಗಳು ವಾಕ್‌ಥಾನ್‌ನಲ್ಲಿ ಪಾಲ್ಗೊಂಡಿದ್ದರು.
Read More » -
ಫೆ.4 ರಂದು ಗೋಪನಕೊಪ್ಪ ವಿದ್ಯುತ್ ವಿತರಣಾ ಉಪಕೇಂದ್ರ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ
ಹುಬ್ಬಳ್ಳಿ, ಫೆ.02: ಹೆಸ್ಕಾಂನ 110ಕೆ.ವಿ ವಿದ್ಯುತ್ ಉಪಕೇಂದ್ರ ಗೋಪನಕೊಪ್ಪದಲ್ಲಿ ಕೇಬಲ್ ಮರು ಹೊಂದಿಸುವ (cable rerouting work) ಕಾರ್ಯವು ಫೆಬ್ರವರಿ 4 ರಂದು ನಡೆಯಲಿದೆ. ಅಂದು ಬೆಳಿಗ್ಗೆ…
Read More » -
ಸಂಘಟಿತ ಹಾಗೂ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಬಜೆಟ್ ಪೂರಕ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ.ಫೆ.01: ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡಂತೆ ಸಂಘಟಿತ ಹಾಗೂ ಸುಸ್ಥಿರ ಅಭಿವೃದ್ಧಿಗೆ 2022-23ನೇ ಸಾಲಿನ ಕೇಂದ್ರ ಬಜೆಟ್ ಪೂರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಮಂಡಿಸಿದ 2022-23ನೇ ಆಯ್ಯವಯ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. “ಒಂದು ದೇಶ ಹಾಗೂ ಒಂದು ತೆರಿಗೆ” ಜೊತೆಗೆ “ಒಂದು ದೇಶ ಒಂದು ಮಾರುಕಟ್ಟೆ” ಎಂಬ ನೀತಿಗೆ ಬಜೆಟ್ ಮುನ್ನುಡಿ ಬರೆದಿದೆ. ಎಲ್ಲಾ ರಾಜ್ಯಗಳ ಆರ್ಥಿಕ ಬಲವರ್ಧನೆಗೆ 1 ಲಕ್ಷ ಕೋಟಿ ರೂಪಾಯಿಗಳ ದೀರ್ಘಕಾಲದ ಸಾಲ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲೂ ದೇಶದ ಆರ್ಥಿಕತೆ ಹಳಿ ತಪ್ಪದ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಚ್ಚರ ವಹಿಸಿದೆ. ವಿಶ್ವದ ಅತಿದೊಡ್ಡ ಉಚಿತ ಲಸಿಕಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ದೇಶದ ಶೇ.70 ರಷ್ಟು ಜನರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಆಯುಷ್ಯಮಾನ ಭಾರತ ಯೋಜನೆ ಅನುಷ್ಠಾನದ ಜೊತೆಗೆ ವೈದ್ಯಕೀಯ ಕ್ಷೇತ್ರ ಮೂಲಭೂತ ಸೌಕರ್ಯ ಹೆಚ್ಚಿಸಲು ಆಯವ್ಯಯದಲ್ಲಿ ಅನುದಾನ ನೀಡಲಾಗಿದೆ. ಆರ್ ಅ್ಯಂಡ್ ಡಿ( ಸಂಶೋಧನೆ ಮತ್ತು ಅಭಿವೃದ್ಧಿ)ಗೆ ಒತ್ತು ನೀಡಿ ಭಾರತ ಆತ್ಮನಿರ್ಭರವಾಗುವ ಕಡೆ ಹೆಜ್ಜೆ ಇರಿಸಲಾಗಿದೆ. ಮುಖ್ಯವಾಗಿ ರಕ್ಷಣಾ ಕ್ಷೇತ್ರದಲ್ಲಿ ಕ್ರಾಂತಿಕಾರ ಬದಲಾವಣೆ ತರಲಾಗಿದೆ. ರಕ್ಷಣಾ ಇಲಾಖೆಗೆ ಮೀಸಲಿರಿಸಿದ ಬಜೆಟ್‌ನಲ್ಲಿ ಶೇ.68 ರಷ್ಟು ಬಂಡವಾಳವನ್ನು ದೇಶದ ರಕ್ಷಣಾ ಕ್ಷೇತ್ರಕ್ಕೆ ಸಂಬಂದಿಸಿದ ಉದ್ದಿಮೆಗಳಲ್ಲಿ ತೊಡಗಿಸಲು ನಿರ್ಧರಿಸಲಾಗಿದೆ. ಖಾಸಗಿ ಕಂಪನಿಗಳು ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.…
Read More » -
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ
ಧಾರವಾಡ, ಜ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಇಂದು (ಜ.30) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ…
Read More » -
ಜಿಲ್ಲಾಧಿಕಾರಿಗೆ ಆಂಬ್ಯುಲೆನ್ಸ್ ಹಸ್ತಾಂತರ
ಹುಬ್ಬಳ್ಳಿ,ಜ.30: ಫ್ಲೀಟ್ ಗಾರ್ಡ್ ಫಿಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಡಿಯಲ್ಲಿ ಮಹೀಂದ್ರಾ ಸುಪ್ರೊ ಝೆಡ್ ಎಕ್ಸ್ ಆಂಬ್ಯುಲೆನ್ಸ್ ನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್…
Read More » -
ಕೇಶ್ವಾಪುರ – ರೈಲ್ವೇ ಕೆಳಸೇತುವೆ ಸಂಪರ್ಕಿಸುವ ನೂತನ ರಸ್ತೆ ಲೋಕಾರ್ಪಣೆ
ಹುಬ್ಬಳ್ಳಿ, ಜ.27: 400 ಕೋಟಿ ರೂಪಾಯಿ ಕೇಂದ್ರ ರಸ್ತೆ ನಿಧಿಯಡಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ…
Read More » -
ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಗಣರಾಜ್ಯ ಸ್ಥಾಪನೆ : ತಹಶೀಲದಾರ ಪ್ರಕಾಶ್ ನಾಶಿ
ಹುಬ್ಬಳ್ಳಿ.ಜ.26: ದೇಶದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಕಾನೂನು ಬದ್ದವಾಗಿ ತೊಡೆದು ಹಾಕಲು ಗಣರಾಜ್ಯವನ್ನು ಸ್ಥಾಪಿಸಲಾಗಿದೆ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ್ ನಾಶಿ ಹೇಳಿದರು. 73ನೇ…
Read More »









