NewsNews In Kannada
ಕ್ಯಾನ್ಸರ್ ಜಾಗೃತಿಗಾಗಿ ವಾಕಥಾನ್

ಹುಬ್ಬಳ್ಳಿ: ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಕಿಮ್ಸ್ ಕ್ಯಾನ್ಸರ್ ವಿಭಾಗಹಾಗೂ ಹುಬ್ಬಳ್ಳಿ ಐಎಂಎ ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿಗಾಗಿ ವಾಕ್‌ಥಾನ್ ನಡೆಸಲಾಯಿತು.
ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ವಾಕ್‌ಥಾನ್‌ಗೆ ಚಾಲನೆ ನೀಡಿದರು.
ಹುಬ್ಬಳ್ಳಿ ಐಎಂಎ ಅಧ್ಯಕ್ಷ ಡಾ.ಎಸ್.ವೈ.ಮುಲ್ಕಿಪಾಟೀಲ್, ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನರ್ಸಿಂಗ್ ಸಿಬ್ಬಂದಿ, ವೈದ್ಯಕೀಯ ಹಾಗೂ ಅರೆವೈದ್ಯಕೀಯ ವಿದ್ಯಾರ್ಥಿಗಳು ವಾಕ್‌ಥಾನ್‌ನಲ್ಲಿ ಪಾಲ್ಗೊಂಡಿದ್ದರು.
