NewsNews In Kannada

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏರಿಯಾ ಡಾಮಿನೇಷನ್

ಹುಬ್ಬಳ್ಳಿ: ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು.

ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 11 ರೌಡಿಶೀಟರ್ ಗಳು, 22 MOB ಗಳು, 7 NDPS ಆರೋಪಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, ರಸ್ತೆಗಳಲ್ಲಿ ಕುಳಿತು ಮಧ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ (Public Nuisance) ಮಾಡುತ್ತಿದ್ದ 64 ಜನರು, ಸೇರಿದಂತೆ ಒಟ್ಟು 107 ಜನರನ್ನು ವಶಕ್ಕೆ ಪಡೆದು ಕೆಪಿ Act ಅಡಿ ಪ್ರಕರಣ ದಾಖಲಿಸಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ MV Act ರಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಮತ್ತು ಅವರಿಗೆ ಸೂಕ್ತ ಎಚ್ಚರಿಕೆಯನ್ನೂ ನೀಡಲಾಗಿದೆ.

ಹುಬ್ಬಳ್ಳಿ ಉತ್ತರ ಉಪವಿಭಾಗದ ACP ರವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

Please follow and like us:

Leave a Reply

Your email address will not be published.

Back to top button
Close